Versions
KNV ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
ERVKN ಇಸ್ರೇಲರು ಆ ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಆ ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಆ ಅರಸನಿಗೂ ಮಾಡಿದರು.
IRVKN ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು. PEPS