Versions
KNV ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
ERVKN ಗಲಿಲಾಯ ಸರೋವರದಿಂದ ಲವಣಸಮುದ್ರದವರೆಗೆ ಹಬ್ಬಿದ ಜೋರ್ಡನ್ ಕಣಿವೆಯ ಪೂರ್ವಭಾಗವು ಕೂಡ ಅವನ ಆಳ್ವಿಕೆಗೆ ಒಳಪಟ್ಟಿತ್ತು. ಬೇತ್ಯೆಷಿಮೋತಿನಿಂದ ದಕ್ಷಿಣದಲ್ಲಿ ಪಿಸ್ಗಾ ಬೆಟ್ಟದವರೆಗೆ ಹಬ್ಬಿದ ಪ್ರದೇಶವನ್ನು ಸಹ ಅವನು ಆಳುತ್ತಿದ್ದನು.
IRVKN ಹಾಗೂ ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣಸಮುದ್ರವೆನಿಸಿಕೊಳ್ಳುವ ಅರಾಬ್ ಸಮುದ್ರದ ಹತ್ತಿರವಿರುವ ಬೇತಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶವು ಇವೇ ಅವನ ರಾಜ್ಯ: