Versions
KNV ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--
ERVKN ಪರ್ವತ ಪ್ರದೇಶ, ಪಶ್ಚಿಮದಿಕ್ಕಿನ ಇಳಿಜಾರು ಪ್ರದೇಶ, ಜೋರ್ಡನ್ ಕಣಿವೆ, ಪೂರ್ವದಿಕ್ಕಿನ ಬೆಟ್ಟಗಳು, ಮರುಭೂಮಿ ಮತ್ತು ನೆಗೆವ್ ಇದರಲ್ಲಿ ಸೇರಿಕೊಂಡಿದ್ದವು. ಈ ಪ್ರದೇಶವು ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ವಾಸಸ್ಥಾನವಾಗಿತ್ತು. ಇಸ್ರೇಲರು ಸೋಲಿಸಿದ ಅರಸರ ಪಟ್ಟಿಯು ಇಂತಿದೆ:
IRVKN ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,