Versions
KNV ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;
ERVKN ಒಂದು ದಿವಸ ಯೆಹೂದ ಕುಲದ ಕೆಲವರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಬಳಿಗೆ ಬಂದರು. ಅವರಲ್ಲಿ ಕನಿಜ್ಜೀಯನೂ, ಯೆಫುನ್ನೆಯ ಮಗನೂ ಆದ ಕಾಲೇಬನು ಒಬ್ಬನಾಗಿದ್ದನು. ಕಾಲೇಬನು ಯೆಹೋಶುವನಿಗೆ, “ಕಾದೇಶ್ಬರ್ನೇಯದಲ್ಲಿ ಯೆಹೋವನು ತನ್ನ ಸೇವಕನಾದ ಮೋಶೆಯೊಂದಿಗೆ ನಮ್ಮಿಬ್ಬರ ವಿಷಯವಾಗಿ ಮಾತಾಡಿದ್ದು ನಿನಗೆ ನೆನಪಿದೆಯಷ್ಟೇ.
IRVKN {ಕಾಲೇಬನ ಸ್ವತ್ತು} PS ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.