Versions
KNV ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
ERVKN ನಿನ್ನ ಪ್ರವಾದಿಗಳು ನಿನಗಾಗಿ ದರ್ಶನಗಳನ್ನು ಕಂಡರು. ಆದರೆ ಅವರ ದರ್ಶನಗಳು ನಿರರ್ಥಕವಾದ ಹುಸಿನುಡಿಗಳಾಗಿವೆ. ಅವರು ನಿನ್ನ ಪಾಪಕಾರ್ಯಗಳನ್ನು ಬಹಿರಂಗಪಡಿಸಲಿಲ್ಲ. ಅವರು ಪರಿಸ್ಥಿತಿಯನ್ನು ಸುಧಾರಿಸುವ ಪ್ರಯತ್ನ ಮಾಡಲಿಲ್ಲ. ಅವರು ನಿನ್ನ ಕುರಿತು ಸಂದೇಶಗಳನ್ನು ಪ್ರವಾದಿಸಿದರು. ಆದರೆ ಅವು ನಿರಾಧಾರವಾದ ಸಂದೇಶಗಳಾಗಿದ್ದು ನಿನ್ನನ್ನು ಮರುಳುಗೊಳಿಸಿದವು.
IRVKN ನಿನ್ನ ಪ್ರವಾದಿಗಳು ಕಂಡ ದರ್ಶನ, ಹೇಳಿದ ಪ್ರವಾದನೆಯ ವಾಕ್ಯಗಳು ವ್ಯರ್ಥ, ನಿಸ್ಸಾರ;
ಅವರು ನಿನ್ನ ದೋಷವನ್ನು ಬೈಲಿಗೆ ತಾರದ ಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ;
ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವುದಕ್ಕೆ ಆಸ್ಪದವಾದವು.