Versions
KNV ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪಬಲಿಯನ್ನೂ ದಹನಬಲಿಯನ್ನೂ ವಧಿಸುವ ಸ್ಥಳದಲ್ಲಿ ವಧಿಸಬೇಕು; ಯಾಕಂದರೆ ಪಾಪಬಲಿಯಂತೆಯೇ ಅಪರಾಧ ಬಲಿಯೂ ಯಾಜಕನದಾಗಿದೆ, ಅದು ಅತಿ ಪರಿಶುದ್ಧವಾದದ್ದು.
ERVKN ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಞಪಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ.
IRVKN ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.