Versions
KNV ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.
ERVKN “ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು.
IRVKN “ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.