Versions
KNV ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು.
ERVKN “ಯೆಹೋವನಿಗೆ ವಿಶೇಷ ಹಬ್ಬದ ದಿನಗಳು ಇವುಗಳೇ. ಈ ವಿಶೇಷ ದಿನಗಳಲ್ಲಿ ನೀವು ಪವಿತ್ರಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯೆಹೋವನಿಗೆ ಸಮರ್ಪಣೆಯಾಗುವ ಸರ್ವಾಂಗಹೋಮ, ಧಾನ್ಯಸಮರ್ಪಣೆ, ಯಜ್ಞಗಳು ಮತ್ತು ಪಾನದ್ರವ್ಯಗಳನ್ನು ಅರ್ಪಿಸಬೇಕು. ನೀವು ಆ ಕಾಣಿಕೆಗಳನ್ನು ಸರಿಯಾದ ಸಮಯದಲ್ಲಿ ಅರ್ಪಿಸಬೇಕು.
IRVKN “ ‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.