Versions
KNV ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
ERVKN ಅದನ್ನು ನೋಡಲು ಜನರೆಲ್ಲರೂ ಯೇಸುವಿದ್ದಲ್ಲಿಗೆ ಬಂದರು. ಆ ಮನುಷ್ಯನು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿದ್ದುದನ್ನು ಅವರು ನೋಡಿದರು. ಅವನು ಬಟ್ಟೆಗಳನ್ನು ಹಾಕಿಕೊಂಡಿದ್ದನು; ಸ್ವಸ್ಥಬುದ್ಧಿಯುಳ್ಳವನಾಗಿದ್ದನು. ದೆವ್ವಗಳು ಅವನನ್ನು ಬಿಟ್ಟುಹೋಗಿದ್ದವು. ಜನರಿಗೆ ಭಯವಾಯಿತು.
IRVKN ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.