Versions
KNV ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ.
ERVKN “ನೀನು ಇಸ್ರೇಲರಿಗೆ ಈ ಆಜ್ಞೆಯನ್ನು ಕೊಡು. ನೀವು ಎಚ್ಚರಿಕೆಯಾಗಿದ್ದು ನೇಮಿತ ಕಾಲಗಳಲ್ಲಿ ನನಗೆ ಅರ್ಪಿಸತಕ್ಕ ಧಾನ್ಯಸಮರ್ಪಣೆಗಳನ್ನು ನನಗೆ ಸುಗಂಧ ಹೋಮಮಾಡಬೇಕು.
IRVKN “ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’