Versions
KNV ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
ERVKN ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.
IRVKN ವಿಗ್ರಹಗಳು ನುಡಿಯುವುದು ಸುಳ್ಳು; ಕಣಿಹೇಳುವವರು ದರ್ಶನವನ್ನು ಕಾಣುವುದು ಸುಳ್ಳು,
ತಿಳಿಸುವ ಕನಸುಗಳು ಮೋಸವಾದವುಗಳು, ಹೇಳುವ ಸಮಾಧಾನವು ವ್ಯರ್ಥ.
ಆದುದರಿಂದ ನನ್ನ ಜನರು ದಿಕ್ಕಾಪಾಲಾಗಿದ್ದಾರೆ; ಕುರುಬನು ಇಲ್ಲದ ಕಾರಣ ಬಾಧೆಗೆ ಒಳಗಾಗಿದ್ದಾರೆ. PS