Versions
KNV ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು.
ERVKN ಅವನ ಸೇವಕರು ಅವನಿಗೆ, “ಇಸ್ರೇಲಿನ ರಾಜರುಗಳು ಕನಿಕರವುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿತಟ್ಟುಗಳನ್ನು (ನಮ್ಮ ನಡುಗಳಿಗೆ) ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗಳ ಮೇಲೆ ಹಾಕಿಕೊಂಡು ಇಸ್ರೇಲಿನ ರಾಜನ ಬಳಿಗೆ ಹೋಗೋಣ. ಅವನು ನಮ್ಮ ಜೀವವನ್ನು ಉಳಿಸಬಹುದು” ಎಂದು ಹೇಳಿದರು.
IRVKN {ಅಹಾಬನು ಬೆನ್ಹದದನನ್ನು ಉಳಿಸಿದ್ದು} PS ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು” ಎಂದು ಹೇಳಿದರು.