Versions
KNV ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ERVKN ಅಹಾಬನು ಪ್ರವಾದಿಗಳ ಸಭೆಯೊಂದನ್ನು ಕರೆದನು. ಆ ಸಮಯದಲ್ಲಿ ನಾನೂರುಮಂದಿ ಪ್ರವಾದಿಗಳಿದ್ದರು. ಅಹಾಬನು ಪ್ರವಾದಿಗಳನ್ನು, “ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ನಾನು ರಾಮೋತಿಗೆ ಹೋಗಬೇಕೇ? ಅಥವಾ ನಾನು ಬೇರೊಂದು ಸಮಯಕ್ಕಾಗಿ ಕಾಯಬೇಕೇ?” ಎಂದು ಕೇಳಿದನು. ಪ್ರವಾದಿಗಳು, “ನೀನು ಹೋಗಿ ಯುದ್ಧಮಾಡು. ನೀನು ಗೆಲ್ಲುವಂತೆ ಯೆಹೋವನು ಮಾಡುವನು” ಎಂದು ಹೇಳಿದರು.
IRVKN ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.