Versions
KNV ಇಸ್ರಾಯೇಲ್ ಮಕ್ಕಳು ಐಗುಪ್ತ ದೇಶದೊಳಗಿಂದ ಬಂದ ಕಾಲದಲ್ಲಿ ಕರ್ತನು ಅವರಿಗೆ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬಿನ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಿಗೆಗಳ ಹೊರತಾಗಿ ಅದರಲ್ಲಿ ಮತ್ತೇನೂ ಇರಲಿಲ್ಲ.
ERVKN ಪವಿತ್ರ ಪೆಟ್ಟಿಗೆಯಲ್ಲಿರುವ ಒಂದೇ ವಸ್ತುವೆಂದರೆ ಎರಡು ಕಲ್ಲಿನ ಹಲಿಗೆಗಳು. ಮೋಶೆಯು ಹೋರೇಬ್ ಎಂಬ ಸ್ಥಳದಲ್ಲಿ ಪವಿತ್ರ ಪೆಟ್ಟಿಗೆಯಲ್ಲಿಟ್ಟ ಎರಡು ಕಲ್ಲಿನ ಹಲಗೆಗಳೇ. ಇವು ಈಜಿಪ್ಟಿನಿಂದ ಹೊರಬಂದ ಇಸ್ರೇಲಿನ ಜನರೊಂದಿಗೆ ಯೆಹೋವನು ಒಪ್ಪಂದ ಮಾಡಿಕೊಂಡ ಸ್ಥಳವೇ ಹೋರೇಬ್.
IRVKN ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.