Versions
KNV ಆಗ ಅವಳ ಗಂಡನಾದ ಎಲ್ಕಾನನು ಅವಳಿಗೆ--ಹನ್ನಳೇ, ಯಾಕೆ ಅಳುತ್ತೀ? ಯಾಕೆ ತಿನ್ನದೆ ಇದ್ದೀ? ಯಾಕೆ ನಿನ್ನ ಹೃದಯದಲ್ಲಿ ದುಃಖಪಡುತ್ತಿದ್ದೀ? ಹತ್ತು ಮಂದಿ ಕುಮಾರರಿಗಿಂತ ನಾನು ನಿನಗೆ ಉತ್ತಮನಲ್ಲವೋ ಅಂದನು.
ERVKN ಅವಳ ಗಂಡನಾದ ಎಲ್ಕಾನನು ಅವಳನ್ನು ಕುರಿತು, “ಹನ್ನಾ, ಯಾಕೆ ಅಳುತ್ತಿರುವೆ? ಯಾಕೆ ಊಟಮಾಡುತ್ತಿಲ್ಲ? ಯಾಕೆ ವ್ಯಸನದಿಂದಿರುವೆ? ನಿನಗೆ ನಾನಿಲ್ಲವೇ? ನಾನು ನಿನ್ನ ಗಂಡ. ನಾನು ನಿನಗೆ ಹತ್ತು ಗಂಡುಮಕ್ಕಳಿಗಿಂತಲೂ ಹೆಚ್ಚಾಗಿದ್ದೇನಲ್ಲಾ” ಎಂದು ಹೇಳಿದನು.
IRVKN ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು. PS