Versions
KNV ಈ ಹಿಜ್ಕೀಯನು ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದದವರಿಗೂ ಯೆರೂಸಲೇಮಿ ನವರಿಗೂ--ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು ಅದರ ಮೇಲೆ ಧೂಪವನ್ನರ್ಪಿಸಬೇಕೆಂದು ಹೇಳಿದ್ದಾನಲ್ಲವೇ?
ERVKN ಹಿಜ್ಕೀಯನು ತಾನೇ ಪೂಜಾಸ್ಥಳಗಳನ್ನೂ ವೇದಿಕೆಗಳನ್ನೂ ತೆಗೆದುಹಾಕಿದ್ದಾನೆ. ಒಂದೇ ಒಂದು ಧೂಪವೇದಿಕೆಯಲ್ಲಿ ಧೂಪಹಾಕಿ ಆರಾಧಿಸಬೇಕೆಂದು ಅವನು ಯೆಹೂದ ಮತ್ತು ಜೆರುಸಲೇಮಿನ ಜನರಾದ ನಿಮಗೆ ಹೇಳುತ್ತಿದ್ದಾನೆ.
IRVKN ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?