Versions
KNV ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
ERVKN ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗ್ರಂಥದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು.
IRVKN “ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.