Versions
KNV ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು.
ERVKN ಯೋಷೀಯನು ಅಶೇರಸ್ತಂಭವನ್ನು ದೇವಾಲಯದಿಂದ ತೆಗೆದುಹಾಕಿದನು. ಅವನು ಅಶೇರಸ್ತಂಭವನ್ನು ನಗರದ ಹೊರವಲಯದ ಕಿದ್ರೋನ್ ಕಣಿವೆಗೆ ತೆಗೆದುಕೊಂಡು ಹೋಗಿ ಅದನ್ನು ಅಲ್ಲಿ ಸುಟ್ಟುಹಾಕಿದನು. ನಂತರ ಅವನು ಅದನ್ನು ಪುಡಿಪುಡಿ ಮಾಡಿಸಿ ಧೂಳಿನಲ್ಲಿ ಬೆರಸಿ ಸಾಮಾನ್ಯ ಜನರ ಸ್ಮಶಾನದಲ್ಲಿ ಆ ಧೂಳನ್ನು ಚೆಲ್ಲಿದನು.
IRVKN ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.