Versions
KNV ಹತಸಾಕ್ಷಿಯಾದ ಸ್ತೆಫನನ ರಕ್ತವು ಸುರಿಯಲ್ಪಟ್ಟಿದ್ದಾಗ ನಾನು ಸಹ ಹತ್ತಿರ ನಿಂತು ಅವನ ಸಾವಿಗೆ ಒಪ್ಪಿದವನಾಗಿ ಅವನನ್ನು ಕೊಂದವರ ವಸ್ತ್ರವನ್ನು ಕಾಯುತ್ತಿದ್ದೆನು ಎಂದು ಹೇಳಿದೆನು.
ERVKN ನಿನ್ನ ಸಾಕ್ಷಿಯಾದ ಸ್ತೆಫನನು ಕೊಲ್ಲಲ್ಪಟ್ಟಾಗ ನಾನು ಅಲ್ಲಿದ್ದದ್ದು ಸಹ ಜನರಿಗೆ ಗೊತ್ತಿದೆ. ಸ್ತೆಫನನನ್ನು ಕೊಲ್ಲಲು ಅವರು ನಿರ್ಧರಿಸಿದಾಗ ನಾನೂ ಅದಕ್ಕೆ ಒಪ್ಪಿಗೆ ಸೂಚಿಸಿ ಅಲ್ಲೇ ನಿಂತುಕೊಂಡಿದ್ದೆನು. ಅಲ್ಲದೆ ಅವನನ್ನು ಕೊಲ್ಲುತ್ತಿದ್ದ ಜನರ ಮೇಲಂಗಿಗಳನ್ನು ಸಹ ನಾನು ಹಿಡಿದುಕೊಂಡಿದ್ದೆ!؆ ಎಂದೆನು.
IRVKN ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.