Versions
KNV ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
ERVKN ಆದುದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.
IRVKN ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು,
ಅದು ಅದರ ಅರಮನೆಗಳನ್ನು ನುಂಗಿಬಿಡುವುದು;
ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು,
ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.