Versions
KNV ಆ ಕೊನೆಯ ದಿನಗಳಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರ ಲೋಕದ ಕಡೆಗೆ ಎತ್ತಿದೆನು; ನನ್ನ ತಿಳುವಳಿಕೆ ನನಗೆ ತಿರುಗಿ ಬಂತು; ಆಗ ನಾನು ಮಹೋನ್ನತನನ್ನು ಸ್ತುತಿಸಿ ನಿರಂತರವಾಗಿ ಜೀವಿಸುವಾತನೂ ನಿತ್ಯವಾದ ಆಳ್ವಿಕೆ ಯನ್ನು ಆಳುವಾತನನ್ನು ತಲತಲಾಂತರಗಳ ವರೆಗೂ ರಾಜ್ಯ ಉಳ್ಳಾತನನ್ನು ಹೊಗಳಿ ಘನಪಡಿಸಿದೆನು.
ERVKN ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ನೋಡಿದೆ. ಆಗ ನಾನು ಸ್ವಸ್ಥ ಬುದ್ಧಿಯುಳ್ಳವನಾಗಿದ್ದೆ. ಬಳಿಕ ನಾನು ಮಹೋನ್ನತನಾದ ದೇವರನ್ನು ಸ್ತುತಿಸಿದೆ. ನಿತ್ಯನಾದ ಆ ದೇವರನ್ನು ಕೊಂಡಾಡಿದೆ. ಸ್ತೋತ್ರಮಾಡಿದೆ. ದೇವರ ಆಳ್ವಿಕೆಯು ಶಾಶ್ವತವಾದದ್ದು! ಆತನ ಸಾಮ್ರಾಜ್ಯವು ಎಲ್ಲಾ ತಲೆಮಾರುಗಳಲ್ಲಿಯೂ ಇರುವುದು.
IRVKN {ನೆಬೂಕದ್ನೆಚ್ಚರನು ದೇವರನ್ನು ಸ್ತುತಿಸಿದ್ದು} PS ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು.
“ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ,
ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು;
ಆತನ ಆಳ್ವಿಕೆಯು ಶಾಶ್ವತ,
ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.