Versions
KNV ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.
ERVKN ಮತ್ತು ಪತ್ರದಲ್ಲಿ ಪೂರಿಮ್ ಹಬ್ಬವನ್ನು ಆಚರಿಸಲು ಪ್ರಾರಂಭಿಸಿರಿ ಎಂದೂ ಬರೆದಿದ್ದನು. ಈ ಹಬ್ಬವನ್ನು ಯಾವ ದಿನ ಆಚರಿಸಬೇಕು ಎಂಬುದನ್ನೂ ನಮೂದಿಸಿದನು. ಈ ಎರಡು ವಿಶ್ರಾಂತಿ ದಿನಗಳನ್ನು ತಮಗೂ ತಮ್ಮ ಸಂತಾನಗಳವರಿಗೂ ಖಾಯಂಗೊಳಿಸಲು ಯೆಹೂದಿಯಾದ ಮೊರ್ದೆಕೈಯೂ ರಾಣಿ ಎಸ್ತೇರಳೂ ಯೆಹೂದ್ಯರಿಗೆ ಒಂದು ಆಜ್ಞೆಯನ್ನು ಹೊರಡಿಸಿದರು. ತಮಗೆ ಸಂಬಂಧಿಸಿದ ಕೆಟ್ಟಸಂಗತಿಗಳನ್ನು ನೆನಪಿಗೆ ತಂದುಕೊಂಡು ಬೇರೆ ವಿಶ್ರಾಂತಿ ದಿನಗಳಲ್ಲಿ ಉಪವಾಸವಿದ್ದು ಗೋಳಾಡುವಂತೆ ಈ ಹಬ್ಬದ ದಿನಗಳಲ್ಲಿಯೂ ಅವರು ಮಾಡುವರು.
IRVKN ಆಕೆಯು ದಯಾಸತ್ಯತೆಗಳುಳ್ಳ ಮಾತುಗಳಿಂದ ಆ ಪತ್ರಗಳಲ್ಲಿ, “ಯೆಹೂದ್ಯರು ತಮ್ಮಲ್ಲಿಯೂ ಮತ್ತು ತಮ್ಮ ಸಂತಾನದವರಲ್ಲಿಯೂ ಉಪವಾಸ ಮತ್ತು ಪ್ರಲಾಪ ದಿನಗಳನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರೀಮ್ ದಿನಗಳನ್ನೂ ನನ್ನ ಮತ್ತು ಯೆಹೂದ್ಯನಾದ ಮೊರ್ದೆಕೈಯ ನಿರೂಪದಂತೆ ಪ್ರತಿವರ್ಷ ತಪ್ಪದೆ ನೇಮಿತವಾದ ಕಾಲದಲ್ಲಿ ಆಚರಿಸಬೇಕು” ಎಂದು ಬರೆದಿದ್ದಳು.