Versions
KNV ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
ERVKN ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಇಸ್ರೇಲನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.