Versions
KNV ಆಗ ಅವರು ಫರೋಹ ನಿಗೆ--ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡಿ ದ್ದಾನೆ; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ನಮ್ಮ ದೇವರಾದ ಕರ್ತನಿಗೆ ಬಲಿ ಅರ್ಪಿಸುವದಕ್ಕಾಗಿ ನಾವು ಹೋಗಬೇಕು; ಇಲ್ಲ ವಾದರೆ ಆತನು ವ್ಯಾಧಿಯಿಂದಲಾದರೂ ಕತ್ತಿಯಿಂದ ಲಾದರೂ ನಮ್ಮನ್ನು ಸಂಹಾರ ಮಾಡಾನು ಎಂದು ಅಂದರು.
ERVKN ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.
IRVKN ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು. PEPS