Versions
KNV ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ.
ERVKN ಈ ಕಲ್ಲುಗಳ ಕುಪ್ಪೆಯೂ ವಿಶೇಷವಾದ ಈ ಕಲ್ಲೂ ನಮ್ಮ ಒಪ್ಪಂದವನ್ನು ನೆನಪುಮಾಡಿಕೊಳ್ಳಲು ನಮ್ಮಿಬ್ಬರಿಗೂ ಸಹಾಯ ಮಾಡುತ್ತವೆ. ನಾನು ನಿನಗೆ ವಿರೋಧವಾಗಿ ಹೋರಾಡುವುದಕ್ಕಾಗಿ ಈ ಕಲ್ಲುಗಳನ್ನು ದಾಟಿ ಬರುವುದಿಲ್ಲ. ನೀನು ನನಗೆ ವಿರೋಧವಾಗಿ ಈ ಕಲ್ಲುಗಳನ್ನು ದಾಟಿ ನನ್ನ ಕಡೆಗೆ ಬರಕೂಡದು.
IRVKN ನಾನು ಕೇಡು ಮಾಡುವುದಕ್ಕೋಸ್ಕರ ಈ ಗುಡ್ಡೆಯನ್ನು, ದಾಟಿ ನಿನ್ನ ಬಳಿಗೆ ಬರುವುದಿಲ್ಲ. ಹಾಗೆಯೇ ನೀನು ಈ ಗುಡ್ಡೆಯನ್ನೂ ಈ ಸ್ತಂಭವನ್ನು ದಾಟಿ ನನ್ನ ಬಳಿಗೆ ಬರಕೂಡದು. ಇದಕ್ಕೆ ಈ ಗುಡ್ಡೆಯೂ ಸ್ತಂಭವೂ ಸಾಕ್ಷಿಯಾಗಿರಲಿ.