Versions
KNV ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
ERVKN ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.