Versions
KNV ಅದಕ್ಕೆ ಯೇಸು--ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ ಎಂದು ಉತ್ತರ ಕೊಟ್ಟನು. ಆ ರೊಟ್ಟಿಯ ತುಂಡನ್ನು ಅದ್ದಿ ಆತನು ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟನು.
ERVKN ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.
IRVKN ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.