Versions
KNV ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
ERVKN ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.
IRVKN ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ † ಅಥವಾ, ಶುಭವಾಗಲಿ. ಸಮಾಧಾನವಾಗಲಿ” ಎಂದನು.