Versions
KNV ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
ERVKN ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದುದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
IRVKN ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.