Versions
KNV ಕರ್ತನು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ತಾವು ವಶಮಾಡಿಕೊಂಡ ತಮ್ಮ ಸ್ವಾಸ್ತ್ಯದ ದೇಶವಾಗಿರುವ ಗಿಲ್ಯಾದ್ ದೇಶಕ್ಕೆ ಹೋಗುವದಕ್ಕೆ ಕಾನಾನ್ ದೇಶದಲ್ಲಿರುವ ಶೀಲೋ ವನ್ನೂ ಇಸ್ರಾಯೇಲ್ ಮಕ್ಕಳನ್ನೂ ಬಿಟ್ಟು ತಿರಿಗಿ ಹೋದರು.
ERVKN ಆದುದರಿಂದ ರೂಬೇನ್ ಕುಲದವರು, ಗಾದ್ಯರು, ಮನಸ್ಸೆಕುಲದ ಅರ್ಧಜನರು ಇಸ್ರೇಲಿನ ಬೇರೆ ಕುಲದ ಜನರನ್ನು ಬಿಟ್ಟು ಹೊರಟರು. ಅವರು ಕಾನಾನಿನ ಶೀಲೋವಿನಲ್ಲಿದ್ದರು. ಅವರು ಆ ಸ್ಥಳವನ್ನು ಬಿಟ್ಟು ಗಿಲ್ಯಾದ್ಗೆ ಹಿಂದಿರುಗಿ ಹೋದರು. ಮೋಶೆಯು ಅವರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದ ತಮ್ಮ ಪ್ರದೇಶಕ್ಕೆ ಅವರು ಹೋದರು. ಅವರಿಗೆ ಈ ಪ್ರದೇಶವನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನು.