Versions
KNV ಆಗ ಜನರು ಆಹಾರವನ್ನೂ ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು; ಆದರೆ ಅವನು ಇಸ್ರಾಯೇಲ್ಯರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳ ಭಾಗವಾದ ತಗ್ಗಿನಲ್ಲಿ ಇತ್ತು.
ERVKN ಗಿದ್ಯೋನನು ಉಳಿದ ಇಸ್ರೇಲರನ್ನು ಮನೆಗೆ ಕಳುಹಿಸಿ ಆಯ್ಕೆಗೊಂಡ ಮುನ್ನೂರು ಜನರನ್ನು ಉಳಿಸಿಕೊಂಡನು. ಆ ಮುನ್ನೂರು ಜನರು ಮನೆಗೆ ಹಿಂತಿರುಗಿ ಹೋದವರ ಆಹಾರವನ್ನೂ ತುತ್ತೂರಿಗಳನ್ನೂ ತೆಗೆದುಕೊಂಡರು. ಮಿದ್ಯಾನ್ಯರು ಗಿದ್ಯೋನನ ಪಾಳೆಯದ ಕೆಳಭಾಗದ ತಗ್ಗಿನಲ್ಲಿ ಪಾಳೆಯಮಾಡಿಕೊಂಡಿದ್ದರು.
IRVKN ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಾಯೇಲ್ಯರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ, ಕೊಂಬುಗಳನ್ನೂ ತನ್ನ ಜನರಿಗೋಸ್ಕರ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು. PEPS