Versions
KNV ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
ERVKN ಅಲ್ಲಿ ನಡೆಯುತ್ತಿರುವುದನ್ನು ನೋಡಲು ಜನರೆಲ್ಲರೂ ಓಡಿ ಬರುತ್ತಿರುವುದನ್ನು ಕಂಡ ಯೇಸು, ಆ ದೆವ್ವಕ್ಕೆ “ಎಲೈ ಕಿವುಡು ಮೂಕ ದೆವ್ವವೇ, ಈ ಹುಡುಗನಿಂದ ಹೊರಗೆ ಬರುವಂತೆಯೂ ಇವನೊಳಗೆ ಇನ್ನೆಂದಿಗೂ ಪ್ರವೇಶಿಸದಂತೆಯೂ ನಾನು ನಿನಗೆ ಆಜ್ಞಾಪಿಸುತ್ತೇನೆ!” ಎಂದನು.
IRVKN ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.