Versions
KNV ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ERVKN ಆದುದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದುದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.
IRVKN ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು. PE