Versions
KNV ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
ERVKN “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ.
IRVKN “ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ನಂತರ ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ, ಸರ್ವಾಂಗಹೋಮವಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಬೇಕು. ಅವರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.