Versions
KNV ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
ERVKN ಪರ್ಶಿಯಾದ ರಾಜನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಸಂದೇಶವು ಬಂದಿತು. ಈ ಸಂದೇಶವು ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನಿಗೋಸ್ಕರ, ಯೆಹೋಚಾದಾಕನ ಮಗನಾದ ಯೆಹೋಶುವನಿಗೋಸ್ಕರ ಬಂದಿತು. ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು; ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಸಂದೇಶವು ಇದೇ: