Versions
KNV ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
ERVKN ಯಾಕಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದುದರಿಂದ ನನ್ನ ಕೋಪಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.