Bible Versions
Bible Books

Numbers 21:34 (ERVEN) Easy to Read - English

Versions

KNV   ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.
ERVKN   ಆದರೆ ಯೆಹೋವನು ಮೋಶೆಗೆ, “ಆ ಅರಸನಿಗೆ ಹೆದರಬೇಡ. ನೀನು ಅವನನ್ನು ಸೋಲಿಸುವಂತೆ ಮಾಡುವೆನು. ನೀನು ಅವನ ಸೈನ್ಯವನ್ನು ಮತ್ತು ಅವನ ದೇಶವನ್ನು ಪೂರ್ಣವಾಗಿ ವಶಪಡಿಸಿಕೊಳ್ಳುವೆ. ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದಂತೆ ಇವನಿಗೂ ಸಹ ಮಾಡುವಿರಿ” ಅಂದನು.
IRVKN   ಯೆಹೋವನು ಮೋಶೆಗೆ, “ಅವನಿಗೆ ಭಯಪಡಬೇಡ, ನಾನು ಅವನನ್ನು ಮತ್ತು ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ನಿನ್ನ ಕೈಗೆ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವರಿಗೂ ಮಾಡಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us