Versions
KNV ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
ERVKN ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.
IRVKN ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.