Versions
KNV ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.
ERVKN ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.
IRVKN ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.