Versions
KNV ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
ERVKN ನನ್ನ ಒಡೆಯನಾದ ಯೆಹೋವನು ಒಂದು ವಾಗ್ದಾನ ಮಾಡಿರುತ್ತಾನೆ. ಆತನ ಪರಿಶುದ್ಧತೆಯ ಮೇಲೆ ಆಣೆಹಾಕಿ ವಾಗ್ದಾನ ಮಾಡಿರುತ್ತಾನೆ. ಏನಂದರೆ ನಿಮ್ಮ ಮೇಲೆ ಸಂಕಟಗಳು ಬರುವವು. ಜನರು ನಿಮಗೆ ಕೊಕ್ಕೆ ಸಿಕ್ಕಿಸಿ ಕೈದಿಗಳನ್ನಾಗಿ ಮಾಡಿ ಎಳೆದುಕೊಂಡು ಹೋಗುವರು. ನಿಮ್ಮ ಮಕ್ಕಳನ್ನು ಮೀನಿನ ಗಾಳಗಳಿಗೆ ಸಿಕ್ಕಿಸಿ ಎಳೆದುಕೊಂಡು ಹೋಗುವರು.
IRVKN ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು:
“ಇಗೋ ನಿಮ್ಮನ್ನು ಕೊಂಡಿಗಳಿಂದಲೂ,
ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ,
ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.