Versions
KNV ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.
ERVKN ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.
IRVKN ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.