Versions
KNV ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.
ERVKN ಇಸ್ರೇಲರು ತಪ್ಪಿಸಿಕೊಂಡರೆಂಬ ವರದಿಯನ್ನು ಕೇಳಿದಾಗ, ಫರೋಹನ ಮತ್ತು ಅವನ ಅಧಿಕಾರಿಗಳ ಮನಸ್ಸುಗಳು ಬದಲಾದವು. ಫರೋಹನು, “ಇಸ್ರೇಲರನ್ನು ನಾವು ಯಾಕೆ ಹೋಗಲು ಬಿಟ್ಟೆವು? ಅಯ್ಯೋ, ನಾವೀಗ ನಮ್ಮ ಗುಲಾಮರನ್ನು ಕಳೆದುಕೊಂಡೆವಲ್ಲಾ!” ಎಂದು ಹೇಳಿದನು.
IRVKN ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.