Versions
KNV ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.
ERVKN ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಕಾ ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.)
IRVKN ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.