Versions
KNV ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
ERVKN ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.
IRVKN ಬೆಳಿಗ್ಗೆ ಫರೋಹನು ಮನದಲ್ಲಿ ಕಳವಳಗೊಂಡು, ಐಗುಪ್ತದೇಶದಲ್ಲಿದ್ದ ಎಲ್ಲಾ ಜೋಯಿಸರನ್ನೂ, ವಿದ್ವಾಂಸರನ್ನೂ ಬರುವಂತೆ ಹೇಳಿಕಳುಹಿಸಿದನು. ಅವರಿಗೆ ತನ್ನ ಕನಸನ್ನು ತಿಳಿಸಲಾಗಿ, ಅದರ ಅರ್ಥವನ್ನು ಅವನಿಗೆ ಹೇಳ ಬಲ್ಲವರು ಅವರಲ್ಲಿ ಒಬ್ಬನೂ ಸಿಕ್ಕಲಿಲ್ಲ. PEPS