Versions
KNV ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದ್ದಲ್ಲದೆ ಅವನನ್ನು ಕರಕೊಂಡು ಹೋಗುವದಕ್ಕೆ ಯೋಸೇಫನು ಕಳುಹಿಸಿದ ಬಂಡಿಗಳನ್ನು ಅವನು ನೋಡಿದಾಗ ಅವರ ತಂದೆಯಾದ ಯಾಕೋಬನ ಆತ್ಮವು ಉಜ್ಜೀ ವಿಸಿತು.
ERVKN ಆದರೆ ಯೋಸೇಫನು ತಮಗೆ ಹೇಳಿದ್ದೆಲ್ಲವನ್ನು ಸಹೋದರರು ತಮ್ಮ ತಂದೆಗೆ ಹೇಳಿದರು. ಆಮೇಲೆ ತನ್ನನ್ನು ಈಜಿಪ್ಟಿಗೆ ಕರೆದುಕೊಂಡು ಬರಲು ಯೋಸೇಫನು ಕಳುಹಿಸಿದ್ದ ರಥಗಳನ್ನು ಯಾಕೋಬನು ನೋಡಿ ಉಲ್ಲಾಸಪಟ್ಟನು.
IRVKN ತರುವಾಯ ಯೋಸೇಫನು ಹೇಳಿ ಕಳುಹಿಸಿದ್ದ ಎಲ್ಲಾ ಮಾತುಗಳನ್ನು ಕೇಳಿ ತನ್ನ ಪ್ರಯಾಣಕ್ಕೋಸ್ಕರ ಯೋಸೇಫನ ಕಡೆಯಿಂದ ಬಂದ ರಥಗಳನ್ನು ನೋಡಿದಾಗ ಯಾಕೋಬನ ಆತ್ಮವು ಉಲ್ಲಾಸಗೊಂಡಿತು, ಅಲ್ಲದೆ ಅವನಿಗೆ ಹೊಸ ಜೀವ ಬಂದಂತಾಯಿತು.