Versions
KNV ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ERVKN “ಅವರು ನನ್ನ ಪವಿತ್ರ ಪಟ್ಟಣದಲ್ಲಿ ವಾಸಿಸುವರು. ಅವರು ಪಟ್ಟಣದಿಂದ ಹೊರಗೆ ಹೋದರೆ ನನಗೆ ವಿರುದ್ಧವಾಗಿ ಪಾಪ ಮಾಡಿದವರ ಹೆಣಗಳನ್ನು ನೋಡುವರು. ಅವರ ಹೆಣಗಳೊಳಗೆ ಸಾಯದ ಹುಳಗಳಿರುವವು. ಬೆಂಕಿಯು ಆ ಹೆಣಗಳನ್ನು ಸುಟ್ಟುಬಿಡುವುದು. ಆ ಬೆಂಕಿಯು ಆರುವದೇ ಇಲ್ಲ. ಅವು ಜನರ ಮುಂದೆ ಅಸಹ್ಯವಾಗಿರುವವು.”
IRVKN “ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು;
ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ;
ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.” PE