Versions
KNV ಆಗ ಗಿಬ್ಯೋನಿನ ಜನರು--ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿದ್ದರಿಂದ ನಿನ್ನ ಸೇವಕರನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು ನಮ್ಮನ್ನು ರಕ್ಷಿಸಿ ಸಹಾಯಮಾಡು ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿಕೊಂಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.
ERVKN ಗಿಲ್ಗಾಲಿನ ಪಾಳೆಯದಲ್ಲಿದ್ದ ಯೆಹೋಶುವನಿಗೆ ಗಿಬ್ಯೋನ್ ನಗರದ ಜನರು ಒಂದು ಸಂದೇಶವನ್ನು ಕಳಿಸಿದರು. ಆ ಸಂದೇಶ ಹೀಗಿತ್ತು: “ನಾವು ನಿಮ್ಮ ಸೇವಕರಾಗಿದ್ದೇವೆ, ನಮ್ಮನ್ನು ನಿಸ್ಸಹಾಯಕರಾಗಿ ಬಿಡಬೇಡಿರಿ. ಬಂದು ನಮಗೆ ಸಹಾಯ ಮಾಡಿರಿ; ತ್ವರೆಮಾಡಿರಿ; ನಮ್ಮನ್ನು ಉಳಿಸಿರಿ. ಬೆಟ್ಟಪ್ರದೇಶದ ಅಮೋರಿಯರ ಅರಸರೆಲ್ಲಾ ತಮ್ಮ ಸೈನ್ಯವನ್ನು ಒಟ್ಟುಗೂಡಿಸಿ ನಮ್ಮ ವಿರುದ್ಧ ಯುದ್ಧಮಾಡುತ್ತಿದ್ದಾರೆ.”
IRVKN ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡದೆ, ಬೇಗನೆ ಬಂದು ಸಹಾಯಮಾಡಿ ನಮಗೆ ವಿರೋಧವಾಗಿ ಸೇರಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿರಿ” ಎಂದು ಬೇಡಿಕೊಂಡರು.