Versions
KNV ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
ERVKN ಫಿಲಿಷ್ಟಿಯ ಅಧಿಪತಿಗಳು ಒಂದು ಉತ್ಸವವನ್ನು ಮಾಡಲು ಸೇರಿಬಂದಿದ್ದರು. ಅವರು ತಮ್ಮ ದೇವರಾದ ದಾಗೋನನಿಗೆ ಒಂದು ಮಹಾಯಜ್ಞವನ್ನು ಸಮರ್ಪಿಸಬೇಕೆಂದಿದ್ದರು. “ನಮ್ಮ ಶತ್ರುವಾದ ಸಂಸೋನನನ್ನು ಸೋಲಿಸಲು ನಮ್ಮ ದೇವರು ನಮಗೆ ಸಹಾಯ ಮಾಡಿದನು” ಎಂದು ಅವರು ಭಾವಿಸಿದ್ದರು.
IRVKN {ಸಂಸೋನನ ಮರಣ} PS ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ § 1 ಸಮು 5:2-7. ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.