Versions
KNV ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
ERVKN ಈ ಸುಂಕದ ಅಧಿಕಾರಿಗಳೊಂದಿಗೆ ಮತ್ತು ಇತರ ಕೆಟ್ಟ ಜನರೊಂದಿಗೆ ಯೇಸು ಊಟಮಾಡುತ್ತಿರುವುದನ್ನು ಧರ್ಮೋಪದೇಶಕರು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ, “ಯೇಸು ಪಾಪಿಗಳೊಂದಿಗೆ ಮತ್ತು ಸುಂಕದ ಅಧಿಕಾರಿಗಳೊಂದಿಗೆ ಏಕೆ ಊಟ ಮಾಡುತ್ತಾನೆ?” ಎಂದು ಕೇಳಿದರು.
IRVKN ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.