Versions
KNV ಆಗ ಸೇವಕರಲ್ಲಿ ಒಬ್ಬನು ಅವನಿಗೆ ಪ್ರತ್ಯುತ್ತರವಾಗಿ--ಇಗೋ, ಬಾರಿಸಲು ನಿಪುಣನಾ ದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದೆನು. ಅವನು ಧೈರ್ಯಸ್ಥನೂ ಪರಾಕ್ರಮ ಶಾಲಿಯೂ ರಣಶೂರನಾಗಿಯೂ ಕಾರ್ಯಗಳಲ್ಲಿ ಬುದ್ಧಿವಂತನಾಗಿಯೂ ಚೆಲುವಿಕೆಯುಳ್ಳವನಾಗಿಯೂ ಇದ್ದಾನೆ. ಇದಲ್ಲದೆ ಕರ್ತನು ಅವನ ಸಂಗಡ ಇದ್ದಾನೆ ಅಂದನು.
ERVKN ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೇತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.
IRVKN ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.